ಹಂಸಾನಂದಿ Hamsanandi हंसानन्दि Profile picture
ಓದುಗ-ಬರಹಗಾರ-ವಾಗ್ಗೇಯಕಾರ-ಅನುವಾದಕ-ನಾಟಕಕಾರ Reader-Writer-3 Stage plays-Over 75 original music compositions- Author of 2 published books A companion of ಮುದ್ದುರಂಗ
Sep 13, 2018 7 tweets 3 min read
It is generally around these festival days I miss my hometown very much -ಜನವರಿಯ ಜಾತ್ರೆ. ನೆಹರೂ ಬಟರ್ ಸ್ಟೋರ್. ಮಂಗಳವಾರ ಸಂತೆ. ಚಳಿಗಾಲದ ಕಾವಳ. ಅದರ ಜೊತೆಗೆ ಸೊಗಡಿನ ಅವರೇಕಾಯಿ.ರಾತ್ರಿ ಓಡಾಡುವಾಗ ಜೀವವೇ ಬಾಯಿಗೆ ಬರುವಂತೆ ಬೊಗಳುವ ಬೀದಿ ನಾಯಿಗಳು. ಸುಧಾ ಹೋಟೆಲ್ಲಿನ ಮಸಾಲೆ ದೋಸೆ. ಕಟ್ಟಿನ ಕೆರೆಯ ಬಸ್ ಸ್ಟಾಂಡ್. (1/n) ಜಾತ್ರೆ ಮಾಳಕ್ಕೆ ಹೋಗುವ ಅಲಂಕಾರ ಮಾಡಿರುವ ರಾಸುಗಳು. ಪಿಕ್ಚರ್ ಪ್ಯಾಲೇಸ್ ಮುಂದೆ ಚೌಕಾಸಿ ವ್ಯಾಪಾರ. ಗಂಧದ ಕೋಟಿ. ಸಂಪಿಗೆ ರಸ್ತೆ. ವರುಷದಲ್ಲಿ ಒಮ್ಮೆ ಮಾತ್ರ ಹತ್ತು ದಿನ ತೆಗೆಯುವ ಊರ ದೇವತೆಯ ಗುಡಿ. ಮೂರು ತಿಂಗಳ ಸೋನೆ ಮಳೆ. ಗಣಪತಿ ಪೆಂಡಾಲಿನಲ್ಲಿ ಕದ್ರಿ ಗೋಪಾಲನಾಥ್ ಸ್ಯಾಕ್ಸಫೋನ್ ಕಚೇರಿ. ಡಬಲ್ ಟ್ಯಾಂಕ್ ಬಳಿ ಆಡುವ ಹುಡುಗರು. (2/n)